ನಗರ ನೂತನ ಪೊಲೀಸ್ ಆಯುಕ್ತರಾಗಿ ಅಲೋಕ್‍ಕುಮಾರ್

ASF Commander Alok Kumar taken charge as Bangalore City Law and Order Additional Commissioner of Police at Police Commissioner office in Bengaluru on Wednesday.

ಬೆಂಗಳೂರು, ಜೂ.17-ರೌಡಿಗಳಿಗೆ, ಸಮಾಜಘಾತುಕರಿಗೆ ಹಾಗೂ ಕ್ರಿಮಿನಲ್‍ಗಳಿಗೆ ಸಿಂಹಸ್ವಪ್ನ ಈ ಪೊಲೀಸ್ ಅಧಿಕಾರಿ ಅಲೋಕ್‍ಕುಮಾರ್.

ಇವರು ಬೆಂಗಳೂರು ನಗರದ ದಕ್ಷಿಣ ವಿಭಾಗದ ಡಿಸಿಪಿಯಾಗಿ ನಗರದಲ್ಲಿ ಸೇವೆ ಆರಂಭಿಸಿ ಈಗ ನಗರದ ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಮತ್ತು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯಲ್ಲಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಬೆಂಗಳೂರು ನಗರದ ಕೆಲವು ರೌಡಿಗಳು ನಗರವನ್ನೇ ಬಿಟ್ಟು ಬೇರೆ ಪಟ್ಟಣ, ನಗರಗಳಲ್ಲಿ ವಾಸವಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಹೆಚ್ಚಾಗಿ ವರದಿಯಾಗುವ ವಂಚನೆ ಪ್ರಕರಣಗಳ ಬಗ್ಗೆ ಹೆಚ್ಚು ಗಮನಹರಿಸುವ ಇವರು, ಕೆಲವು ಪ್ರಕರಣಗಳಲ್ಲಿ ಮುಲಾಜಿಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರದ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಲೋಕ್‍ಕುಮಾರ್ ಅವರಿಗೆ ಬಡ್ತಿ ನೀಡಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ