
ಬೆಂಗಳೂರು,ಜೂ.18- ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ, 2018-19ರಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿಗಳ ಸಭೆಯನ್ನು ಜೆಡಿಎಸ್ ಜೂ.21ರಂದು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷರಾದ ಅಡಗೂರು ಎಚ್.ವಿಶ್ವನಾಥ್ ಸೇರಿದಂತೆ ಪಕ್ಷದ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಸದರು, ಶಾಸಕರು, ಪಕ್ಷದ ಸಚಿವರು, ಮುಖಂಡರು ಸೇರಿದಂತೆ ಪಕ್ಷದ ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರುಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್ ರಾಜ್ಯ ಕಾಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.