ಕಾಂಗ್ರೇಸ್‍ನಲ್ಲಿ ಮೇಜರ್ ಸರ್ಜರಿ ಮಾಡಲು ಮುಂದಾದ ರಾಹುಲ್ ಗಾಂಧಿ

ನವದೆಹಲಿ, ಜೂ.18- ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಮತ್ತು ವಿವಿಧ ರಾಜ್ಯಗಳಲ್ಲಿ ಬಂಡಾಯದ ಬಿಸಿಯಿಂದ ಕಂಗೆಟ್ಟಿರುವ ಕಾಂಗ್ರೆಸ್‍ನಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮುಂದಾಗಿದ್ದಾರೆ.

ವಿದೇಶದಲ್ಲಿ ಒಂದು ವಾರ ವಿರಾಮ ಕಳೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮರಳಿದ್ದು, ಕಾಂಗ್ರೆಸ್‍ನಲ್ಲಿ ಶೀಘ್ರ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಹಾಗೂ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೆ ಹೇಳಿದ್ದು, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ, ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ರಾಜ್ಯ ಘಟಕಗಳು ಹಾಗೂ ಪದಾಧಿಕಾರಿಗಳ ಬದಲಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭೆಯಲ್ಲಿ ವಯನಾಡು ಕ್ಷೇತ್ರದ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಹುಲ್ ಗಾಂಧಿ ಆಗಮನದೊಂದಿಗೆ ಲೋಕಸಭೆಯಲ್ಲಿ ಪಕ್ಷವನ್ನು ಯಾರು ಮುನ್ನಡೆಸಬೇಕು ಮತ್ತಿತರ ಸಂಬಂಧ ಒಂದರಡು ದಿನಗಳಲ್ಲಿ ಅಂತಿಮವಾಗುವ ಸಾಧ್ಯತೆ ಇದೆ. ಹಿರಿಯ ಕಾಂಗ್ರೆಸ್ ಸಂಸದ ಕೇರಳದ ಕೆ.ಸುರೇಶ್ ಲೋಕಸಭೆಯಲ್ಲಿ ಪಕ್ಷದ ನಾಯಕತ್ವ ಸಂಬಂಧ ಹಲವು ಸುತ್ತಿನ ಮಾತುಕತೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲೂ ಕೆ.ಸುರೇಶ್ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದರು. ಮೋದಿ ನಂತರ ಎರಡನೇವರಾಗಿ ಕೆ.ಸುರೇಶ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪಂಜಾಬಿನ ಸಂಸದ ಮನೀಷ್ ತಿವಾರಿ, ಪಶ್ಚಿಮ ಬಂಗಾಳ ಸಂಸದ ಅಧೀರ್ ರಂಜನ್ ಚೌದರಿ ಹೆಸರು ಕೂಡಾ ಕೇಳಿಬರುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ