ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ವಿಶ್ವನಾಥ್ ಮುಂದುವರೆಯಬೇಕು-ವೈ.ಎಸ್.ವಿ.ದತ್ತ

ಬೆಂಗಳೂರು, ಜೂ.18- ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ವಿಶ್ವನಾಥ್ ಅವರು ಮುಂದುವರೆಯುವುದು ಉತ್ತಮ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇವೆ. ಪಕ್ಷ ಸಂಘಟನೆ ಮಾಡುತ್ತೇವೆ. ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಶ್ವನಾಥ್ ಅವರು ಮುಂದುವರೆಯಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಾಕಷ್ಟು ಹೆಸರು ಮಾಡಿದ್ದಾರೆ. ಈ ಇಬ್ಬರೂ ಕೂಡ ಪ್ರಜ್ವಲಿಸುತ್ತಿದ್ದಾರೆ. ಜೆಡಿಎಸ್ ಯುವ ಘಕಟದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ