ಉತ್ತಮ ಸಾರಿಗೆ ಸೇವೆ ಒದಗಿಸುವ ಹಿನ್ನಲೆ-ತಂತ್ರಜ್ಞಾನ ಬಳಕೆ ಸೇರಿದಂತೆ ಸುಧಾರಣ ಕ್ರಮಗಳನ್ನು ಕೈಗೊಳ್ಳಲಾಗುವುದು-ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಜೂ.19- ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.

ಬಸ್ ಅಂಡ್ ಕಾರ್ ಆಪರೇಟರ್ ಕಾನ್ಫಡ್ರೇಷನ್ ಆಫ್ ಇಂಡಿಯಾದ ಭಾರತದ ಅಂತಾರಾಷ್ಟ್ರೀಯ ಬಸ್ ಮತ್ತು ಕಾರು 2ನೇ ಆವೃತ್ತಿಯ ಪ್ರವಾಸ್ ಪ್ರದರ್ಶನದ ಕರ್ಟನ್ ರೈಸರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರಿಗೆ ಸೇವೆಯನ್ನು ಉತ್ತಮಪಡಿಸಲು ತಂತ್ರಜ್ಞಾನ ಬಳಕೆ, ಇ ಪಾವತಿ ವ್ಯವಸ್ಥೆ, ರಸ್ತೆ ಸುರಕ್ಷತೆ, ಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವು ಉಪಯುಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 2.10 ಕೋಟಿ ವಾಹನಗಳಿದ್ದು, ಬೆಂಗಳೂರಿನಲ್ಲಿ 80 ಲಕ್ಷವಾಹನಗಳಿವೆ. ಇದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ ಎಂದರು.

ಖಾಸಗಿಬಸ್ಸು ಮತ್ತು ಕ್ಯಾಬ್ ಮಾಲೀಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದ ಅವರು, ಖಾಸಗಿ ಸಾರಿಗೆ ಸೇವಾದಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವ ಭರವಸೆಯನ್ನು ಅವರು ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ