
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬುಧವಾರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘಾಯಸ್ಸು, ಆರೋಗ್ಯ ನೀಡಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
1970ನೇ ಇಸವಿ ಜೂನ್ 19ರಂದು ರಾಹುಲ್ ಗಾಂಧಿ ಜನಿಸಿದ್ದರು. ಈ ಇಬ್ಬರೂ ನಾಯಕರು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದಿದೆ.