ಕಾಂಗ್ರೆಸ್ ನಿಂದ ಶಾಸಕ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ದೂರಿನ ಆಧಾರದ ಮೇಲೆ ಎಐಸಿಸಿ ಸೂಚನೆಯ ಮೇರೆಗೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅಮಾನತು ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮಾಜಿ ಸಚಿವ, ಶಿವಾಜಿನಗರ ಶಾಸಕ ಆರ್.ರೋಷನ್​ ಬೇಗ್​ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ಕೆ.ಸಿ.ವೇಣುಗೋಪಾಲ್, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಕಾರಣ ಎಂದು ಬೇಗ್‌ ಬಹಿರಂಗವಾಗಿ ಆರೋಪ ಮಾಡಿದ್ದರು. ಅಲ್ಲದೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆಯೂ ಟೀಕಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಕಾಂಗ್ರೆಸ್ ಬೇಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ