ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ 49ನೇ ಹುಟ್ಟುಹಬ್ಬ

ನವದೆಹಲಿ, ಜೂ.19-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು 49ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂಧಿ, ಸಹೋದರಿ-ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಎ.ಕೆ.ಆಂಟನಿ, ಎಂ. ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪ ಮೊಯ್ಲಿ, ಮುಖ್ಯಮಂತ್ರಿಗಳಾದ ಅಶೋಕ್‍ಗೆಲ್ಲೋಟ್(ರಾಜಸ್ತಾನ), ಕಮಲ್‍ನಾಥ್(ಮಧ್ಯಪ್ರದೇಶ), ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಶೀಲಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಜನ್ಮದಿನದ ಶುಭ ಕೋರಿದ್ದಾರೆ.

ರಾಹುಲ್ ಜೂನ್ 19, 1970ರಂದು ದೆಹಲಿಯಲ್ಲಿ ಜನಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ