ಬೆಂಗಳೂರು, ಜೂ.21- 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.
ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ನಡೆದ ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಗಿಯಾದ್ದರು.
ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಆಯೋಜಿಸಿದ್ದ ಯೋಗಾಸನ ಕಾರ್ಯಕ್ರಮದಲ್ಲಿ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಆನಂದ್ ದೋತಿಹಾಳ್ ಅವರ ನೇತೃತ್ವದಲ್ಲಿ ಯೋಗಾಸನದ ವಿವಿಧ ಭಂಗಿಗಗಳನ್ನು ನೂರಾರು ಜನರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರದರ್ಶಿಸುವ ಮೂಲಕ ಯೋಗ ದಿನಾಚರಣೆ ಆಚರಿಸಿದರು.
ಒಂದು ಗಂಟೆ ಕಾಲ ಯೋಗ ಪ್ರದರ್ಶನ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಬಿಜೆಪಿ ಮಹಿಳಾ ಮೊರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ವಕ್ತಾರೆ ಮಾಳವಿಕಾ, ಲೆಹರ್ ಸಿಂಗ್ ಸೇರಿದಂತೆ ಪಕ್ಷದ ಹಲವು ನಾಯಕರು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದರು.