ಬೆಂಗಳೂರು, ಜೂ. 21- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಮುಂದಿನ ನಾಲ್ಕು ವರ್ಷಗಳ ಅವಧಿ ಪೂರೈಸಲಿದೆ ಎಂದು ವಿಧಾನ ಪರಿಷತ ಸದಸ್ಯ ಶರವಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇವೇಗೌಡರು ಮಧ್ಯಂತರ ಚುನಾವಣೆ ಎಂದಿರುವುದು ನಗರ ಸ್ಥಳೀಯ ಸಂಸ್ಥೆ ಕುರಿತಂತೆ ಹೊರತು ಬೇರೆ ಚುನಾವಣೆ ಅಲ್ಲ ಎಂದು ಹೇಳಿದರು.
ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದಲ್ಲಿ ಅದನ್ನು ಬಗೆಹರಿಸಿಕೊಂಡು ಮುಂದುವರೆಯುತ್ತೇವೆ ಎಂದರು.