ವಿಧಾನಸೌಧ, ವಿಕಾಸಸೌಧದ ಅವರಣದಲ್ಲಿ ರಾತ್ರಿ ವೇಳೆ ಪಾರ್ಕಿಂಗ್ ನಿಷೇಧ

ಬೆಂಗಳೂರು,ಜೂ.21-ವಿಧಾನಸೌಧ, ವಿಕಾಸಸೌಧದ ಆವರಣದಲ್ಲಿ ರಾತ್ರಿ ವೇಳೆ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಎರಡೂ ಕಟ್ಟಡಗಳಲ್ಲಿ ಸರ್ಕಾರಿ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಸಿಬ್ಬಂದಿ ಹಾಗೂ ಖಾಸಗಿ ವಾಹನಗಳನ್ನು ನಿಲ್ಲಿಸುವಂತಿಲ್ಲ. ವಾರಗಟ್ಟಲೇ ಪಾರ್ಕಿಂಗ್ ಸ್ಥಳದಲ್ಲೇ ವಾಹನಗಳನ್ನು ಬಿಟ್ಟಿರುವುದನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿ(ಕಾರ್ಯಕಾರಿ) ನಾಗರಾಜ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪಾರ್ಕಿಂಗ್ ಮಾಡಲು ಪ್ರವೇಶ ಪಡೆದಿರುವ ವಾಹನಗಳಿಗೂ ಇದು ಅನ್ವಯವಾಗಲಿದ್ದು, ಒಂದು ವೇಳೆ ರಾತ್ರಿ ಸಮಯದಲ್ಲಿ ಪಾರ್ಕಿಂಗ್ ಮಾಡುವುದನ್ನು ಮುಂದುವರೆಸಿದರೆ ಪೆÇಲೀಸರು ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ