ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹೆಚ್ಚು ಮಳೆ-ಮುನ್ನೆಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಬೆಂಗಳೂರು,ಜೂ.24-ಹೆಚ್ಚು ಮಳೆಯಾಗುತ್ತಿರುವ ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ನಿನ್ನೆ ಹೆಚ್ಚು ಮಳೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಎಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಂಕಷ್ಟಕ್ಕೊಳಗಾಗುವ ಜನರ ನೆರವಿಗೆ ಧಾವಿಸುವಂತೆ ನಿರ್ದೇಶನ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ