ಬೆಂಗಳೂರು, ಜೂ. 24- ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಇವರ ಹೃದಯ ಶಸ್ತ್ರ ಚಿಕಿತ್ಸೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ ಎರಡು ಬಾರಿ ಹೃದಯಾಘಾತವಾಗಿದ್ದ ಇವರು, ಇಂದು ಬೆಳಿಗ್ಗೆ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರು.
ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.