ನಗರ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕು-ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಂಜಪ್ಪ

ಬೆಂಗಳೂರು,ಜೂ.24-ನಗರದ ಸಂಚಾರ ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದ್ದು ಸಾವು-ನೋವುಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಂಜಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದ ಸಂಚಾರ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಹೇಳಿದರು.

ಸಾರಿಗೆ ಬಸ್ ನಿಲ್ದಾಣ ಸರಿಪಡಿಸುವುದು, ಚಾಲಕರಿಗೆ ಸಂಚಾರ ನಿಯಮ ತಿಳಿಸುವುದು, ಸಿಗ್ನಲ್ ಫ್ರೀ ಸೇತುವೆಗಳನ್ನು ವ್ಯಜ್ಞಾನಿಕವಾಗಿ ಬಳಸುವುದು, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‍ಗಳು, ದೊಡ್ಡ ದೊಡ್ಡ ವಸತಿ ಸಂಕೀರ್ಣಗಳ ಪ್ರವೇಶ ದ್ವಾರಗಳನ್ನು ಮರು ವಿನ್ಯಾಸಗೊಳಿಸುವುದು , ನಗರದ ರಸ್ತೆಗಳ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ