ಶರಾವತಿಯಿಂದ ಬೆಂಗಳೂರಿಗೆ ನೀರು-ಶಾಸಕ ಬಿ.ಸಿ.ಪಾಟೀಲ್ ತೀವ್ರ ವಿರೋಧ

ಬೆಂಗಳೂರು,ಜೂ.24-ಶರಾವತಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆಗೆ ಆಡಳಿತ ಪಕ್ಷದ ಶಾಸಕ ಬಿ.ಸಿ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರಿಗೆ ಶರಾವತಿ ನದಿಯ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ವಿರೋಧ ಇದೆ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ ಉತ್ತರ ಕರ್ನಾಟಕವನ್ನು ಬೆಳೆಸಿ. ಇಲ್ಲಿ ಸಾಕಷ್ಟು ನದಿಗಳಿವೆ ಎಂದು ಮುಖ್ಯಮಂತ್ರಿಯವರನ್ನು ಕುರಿತು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಶರಾವತಿಯಿಂದ ನೀರು ತರುವ ಯೋಜನೆಗೆ ರಾಜ್ಯಸರ್ಕಾರ ಕೈ ಹಾಕಿದೆ. ಈ ಬಗ್ಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸುವಂತೆ ಉಪಮುಖ್ಯಮಂತ್ರಿ ಹಾಗೂ ನಗರ ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿ.ಸಿ.ಪಾಟೀಲ್ ಅವರು, ಬೆಂಗಳೂರು ಬೆಳವಣಿಗೆಯನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ