ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಸೀಟು

ಬೆಂಗಳೂರು, ಜೂ.25- ರೈಟ್ ಕೇರ್ ಚಾರಿಟಬಲ್ ಸಂಸ್ಥೆ ಮತ್ತು ಎಂಜಿನಿಯರಿಂಗ್ ಪ್ರಾಂಶುಪಾಲ ಸಮಿತಿ ವತಿಯಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ರಾಜ್ಯದ ಆಯ್ದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಸೀಟುಗಳನ್ನು ಒದಗಿಸಲು ನಿರ್ಧರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕದ ಆಯ್ದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 20 ಸಾವಿರದಷ್ಟು ಸೀಟುಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ.

ಆಸಕ್ತ ವಿದ್ಯಾರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ ಮತ್ತು ಎಸ್‍ಎಸ್‍ಎಲ್‍ಸಿ, ಪಿಯುಸಿ ಅಂಕಪಟ್ಟಿ ಹಾಗೂ ತಮ್ಮ ವಿವರಗಳನ್ನು ಸಂಸ್ಥೆಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ 080-48537638 ಸಂಪರ್ಕಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ