
ಬೆಂಗಳೂರು, ಜೂ.25-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮ ವಾಸ್ತವ್ಯದ ಬಗ್ಗೆ ಕೇಳಿರುವ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮವಾಸ್ತವ್ಯ ನಿಷ್ಪ್ರಯೋಜಕ ಕಾರ್ಯಕ್ರಮವಾಗಿದೆ. ಕಳೆದ ಅವಧಿಯಲ್ಲಿ ಮಾಡಿದ್ದ ಗ್ರಾಮ ವಾಸ್ತವ್ಯದ ಬಗ್ಗೆ ಮುಖ್ಯಮಂತ್ರಿಗಳು ನಿಖರವಾದ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಗ್ರಾಮಗಳ ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದರು.