ಜಿ-20 ಶೃಂಗಸಭೆ-ವಿಶ್ವ ನಾಯಕರನ್ನು ಭೇಟಿ ಮಾಡಲಿರುವ ಟ್ರಂಪ್

ವಾಷಿಂಗ್ಟನ್, ಜೂ.25-ಜಪಾನ್‍ನಲ್ಲಿ ಈ ವಾರ ನಡೆಯಲಿರುವ ಜಿ-20 ಶೃಂಗಸಭೆ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ವಾಣಿಜ್ಯ-ವ್ಯಾಪಾರ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನ ಹಿರಿಯ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋದಿ ಅವರಲ್ಲದೇ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರೊಂದಿಗೂ ಟ್ರಂಪ್ ಚರ್ಚಿಸಲಿದ್ದಾರೆ.

ಟ್ರಂಪ್ ಜೂನ್ 27ರಂದು ಜಪಾನ್‍ಗೆ ತೆರಳಲಿದ್ದಾರೆ. ಜೂನ್ 28 ಮತ್ತು 29ರಂದು ಓಸಾಕಾದಲ್ಲಿ ನಡೆಯುವ ಎರಡು ದಿನಗಳ ಶೃಂಗಸಭೆಯಲ್ಲಿ ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ