ರಾಯಚೂರು,ಜೂ 26- ಜನಸಾಮಾನ್ಯರ ದೂರುಗಳ ಸರಮಾಲೆಯೇ ಹರಿದುಬರುತ್ತಿವೆ.
ರಾಯಚೂರಿನ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಡೆಸಿದ ಜನತಾದರ್ಶನದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಹೊತ್ತ ಸಾವಿರಾರು ಮಂದಿ ಸಾಲುಗಟ್ಟಿ ನಿಂತು ಅಹವಾಲು ಸಲ್ಲಿಸಿದರು.
ಇಂದು ಬೆಳಗ್ಗೆ 7 ಗಂಟೆಯಿಂದಲೇ ಉದ್ಯೋಗ, ವೈದ್ಯಕೀಯ ನೆರವು ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು.
ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ 14 ಕೌಂಟರ್ಗಳನ್ನು ತೆರೆಯಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 30 ವೀಲ್ ಚೇರ್ಗಳ ವ್ಯವಸ್ಥೆಯಿದ್ದ ಕೌಂಟರ್ನಲ್ಲಿ 60 ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ನವರು ವಿಕಲಚೇತನರಿಗೆ ನೆರವಾದರು.
ಅಷ್ಟೇ ಅಲ್ಲದೆ, ಪೊಲೀಸರಿಗೂ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 20 ಸಾವಿರ ಮಂದಿಗೆ ಭೋಜನವನ್ನು ಸಿದ್ದಪಡಿಸಲಾಗಿತ್ತು.