ಇಂದು ರಾಜ್ಯಾದ್ಯಂತ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ ಆಚರಣೆ

ಬೆಂಗಳೂರುರಾಜ್ಯದ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡ ಅವರ ಜಯಂತಿಯನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ.

ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕದ ಪಾಳೇಗಾರರಾಗಿದ್ದರು. ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದ್ದರು. ಈಗ ಈ ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

ನಾಡಪ್ರಭು ಕೆಂಪನಂಜೇಗೌಡ ಹಾಗೂ ಲಿಂಗಾಂಬೆ ದಂಪತಿಯ ಮಗನಾಗಿ ಕೆಂಪೇಗೌಡರು ಜನಿಸಿದರು. ಬಾಲ್ಯದಿಂದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ಈ ಎಲ್ಲಾ ವೈಭವಗಳನ್ನು ತಮ್ಮ ನಾಡಿನಲ್ಲೂ ಪ್ರತಿಷ್ಠಾಪಿಸುವ ಬಯಕೆ ಇತ್ತು. ಇದರಿಂದಾಗಿ ಹಲವು ಬಾರಿ ಹಂಪಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳೆಲ್ಲವನ್ನೂ ಮನದಟ್ಟು ಮಾಡಿಕೊಂಡು ಬಂದಿದ್ದರು.

ನಂತರ ನಗರ ನಿರ್ಮಾಣಕ್ಕೆ ಪ್ರದೇಶದ ಆಯ್ಕೆ ಮಾಡುವ ಜವಾಬ್ದಾರಿಯನ್ನೂ ಕೆಂಪೇಗೌಡರೇ ವಹಿಸಿಕೊಂಡಿದ್ದರು. ಕೆಂಪೇಗೌಡರ ತಾಯಿ ಕೆಂಪಾಂಬೆ ಮತ್ತು ಪತ್ನಿ ಚೆನ್ನಮಾಂಬೆ(ಸೋದರ ಮಾವನ ಮಗಳು) ಇಬ್ಬರೂ ಹಳೆ ಬೆಂಗಳೂರಿನವರು. ಹಾಗಾಗಿ ಇಬ್ಬರ ಪ್ರೀತಿಯ ನೆನಪಿಗಾಗಿ ತಾವು ನಿರ್ಮಿಸಿದ ಪಟ್ಟಣಕ್ಕೆ ಬೆಂಗಳೂರು ಎಂದು ಹೆಸರಿಟ್ಟಿರೆಂಬುದು ಹಲವು ವಿದ್ವಾಂಸರ ಅಭಿಪ್ರಾಯ. ಅಲ್ಲದೆ, ಬೆಣಚು ಕಲ್ಲುಗಳಿಂದ ಕೂಡಿದ್ದಕ್ಕೆ ಬೆಂಗಳೂರು ಎನ್ನುವ ಹೆಸರು ಬಂದಿದೆ ಎನ್ನುವ ಮಾತೂಗಳು ಇವೆ. ಅನೇಕ ಅರಸರು ಇದಕ್ಕೆ ಧನ ಸಹಾಯ ಮಾಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ