ಬೆಂಗಳೂರು, ಜೂ.27- ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಇಲ್ಲದೆ ಇರುವ ಮತ್ತು ಪ್ರಕರಣಗಳಲ್ಲಿ ಖುಲಾಸೆಯಾಗಿರುವ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜೂ.30ರಂದು ಬೆಳಗ್ಗೆ 11 ಗಂಟೆಗೆ ಯಲಹಂಕ ಉಪನಗರ ಪೊಲೀಸ್ ಠಾಣೆ ಮುಂದೆ ಬಹಿರಂಗ ಹರಾಜು ಹಾಕಲಾಗುತ್ತದೆ.
ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಯಲಹಂಕ ಉಪನಗರ ಪೊಲೀಸ್ ಠಾಣೆ ಮುಂದೆ ಹಾಜರಾಗಲು ಪ್ರಕಟಣೆ ತಿಳಿಸಿದೆ.