ಬೆಂಗಳೂರು, ಜೂ. 28- ಶೈಕ್ಷಣಿಕ ಹಾಗೂ ಸರ್ಕಾರಿ ಉದ್ಯೋಗದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಈ ಸಂಬಂಧ ಕಾಂಗ್ರೆಸ್ ಪಕ್ಷದಿಂದಲೂ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ.
ಅದೇ ರೀತಿ ನಮ್ಮ ರಾಜ್ಯದಲ್ಲೂ ಮೀಸಲಾತಿ ಹೆಚ್ಚಳ ಮಾಡುವ ಅವಕಾಶವಿದೆ. ಯಾವ ರೀತಿ, ಎಷ್ಟು ಪ್ರಮಾಣದಲ್ಲಿ ಹೆಚ್ಚಳದ ಮಾಡಬೇಕೆಂದುದರ ಬಗ್ಗೆ ಸಮಿತಿ ವರದಿ ನೀಡಲಿ ಎಂದು ಹೇಳಿದರು.