ಬೆಂಗಳೂರು, ಜೂ.28-ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ, ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಅಧಿಕಾರ ಪೂರ್ಣಗೊಳಿಸಲಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ವಿಧಾನಸಭೆಗೆ ಚುನಾವಣೆ ನಡೆದಾಗ ಜನರು 5 ವರ್ಷಗಳ ಅವಧಿಗೆ ಜನಾದೇಶವನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಸರ್ಕಾರ 5 ವರ್ಷ ಆಡಳಿತ ನಡೆಸಲಿದೆ. ಸರ್ಕಾರ ಜನಹಿತ ಕೆಲಸವನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಧ್ಯಂತರ ಚುನಾವಣೆ ಬರುತ್ತದೆ ಎಂದು ಹೇಳಿಲ್ಲ, ಚುನಾವಣೆ ಯಾವಾಗ ಎದುರಾದರೂ ಅದನ್ನು ಎದುರಿಸಲು ಪಕ್ಷ ಸಜ್ಜಾಗಿರಬೇಕು ಎಂಬ ಅರ್ಥದಲ್ಲಿ ಹೇಳಿದ್ದಾರೆ ಎಂದು ಹೇಳಿದರು.