ಬೆಂಗಳೂರು, ಜೂ.29- ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಜು.5ರಿಂದ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಐದು ಮೌಲ್ಯಮಾಪನ ಕೇಂದ್ರಗಳಲ್ಲಿ ಜು.5ರಿಂದ ಮತ್ತು ಬೆಂಗಳೂರು ಉತ್ತರ ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಜು.6ರಿಂದ ಮೌಲ್ಯಮಾಪನ ಪ್ರಾರಂಭವಾಗಲಿದ್ದು, ಮೌಲ್ಯಮಾಪನ ಕಾರ್ಯ ಮುಗಿಯುವವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಮೌಲ್ಯಮಾಪನ ಕೇಂದ್ರಗಳಿಗೆ ಅನಗತ್ಯ ವ್ಯಕ್ತಿಗಳು ಮತ್ತು ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಈ ಕೇಂದ್ರಗಳ ಕಟ್ಟಡಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಅಲೋಕ್ಕುಮಾರ್ ಆದೇಶಿಸಿದ್ದಾರೆ.