ಬೆಂಗಳೂರು, ಜು.1- ಇಂದು ಬೆಳಗ್ಗೆ ವಿಧಾನಸಭಾಧ್ಯಕ್ಷ ರಮೇಶ್ಕುಮಾರ್ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಒಂದು ವೇಳೆ ರಾಜೀನಾಮೆ ನೀಡಿಲ್ಲ ಎನ್ನುವುದಾದರೆ ಮತ್ತೊಮ್ಮೆ ರಾಜೀನಾಮೆ ನೀಡಲು ತಯಾರಿದ್ದೇನೆ ಎಂದು ಶಾಸಕ ಆನಂದ್ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ. ಸಭಾಧ್ಯಕ್ಷರು ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿದ್ದರೆ, ಮತ್ತೊಮ್ಮೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.