ಬೆಂಗಳೂರು, ಜು.2-ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿ ಇರುವ ಅವಕಾಶಗಳ ಬಗ್ಗೆ ಅಮೆರಿಕದ ಉದ್ಯಮಿಗಳೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳ ಮಾಹಿತಿಯನ್ನು ಒದಗಿಸಿದ್ದಾರೆ. ನಿನ್ನೆ ನ್ಯೂಜೆರ್ಸಿಯಿಂದ ವಾಷಿಂಗ್ಟನ್ಗೆ ಆಗಮಿಸಿದ ಮುಖ್ಯಮಂತ್ರಿಗಳು ಬಂಡವಾಳ ಹೂಡಿಕೆ ಕುರಿತಂತೆ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜು.5ರಂದು ಒಕ್ಕಲಿಗರ ಪರಿಷತ್ ಅಮೆರಿಕದ ಸಮಾವೇಶದಲ್ಲಿ ಮುಖ್ಯಮಂತ್ರಿ ಪಾಲ್ಗೊಂಡು ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.