ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 23 ರನ್ ಗಳ ಸೋಲು ಕಂಡಿದೆ.
ಚಸ್ಟರ್ ಲೀ ಸ್ಟ್ರೀಟ್ ಕ್ರೀಡಾಂಗಣದಲ್ಲಿ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 339 ರನ್ ಗಳ ಬೃಹತ್ ಗುರಿ ನೀಡಿತು. ಲಂಕಾ ಪರ ಅವಿಷ್ಕಾ ಫರ್ನಾಂಡೋ 104 ರನ್ ಹಾಗೂ ಕುಶಾಲ್ ಪೆರೆರಾ (64 ರನ್) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಲಂಕಾ ತಂಡ ಬೃಹತ್ ಪೇರಿಸಿತು.
ಲಂಕಾ ನೀಡಿದ 339 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ವಿಂಡೀಸ್ ಪರ ನಿಕೋಲಸ್ ಪೂರನ್ (118ರನ್), ಫಬಿಯಾನ್ ಅಲ್ಲೆನ್ 51 ರನ್ ಗಳಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರಾದರೂ, ಕೆಳ ಕ್ರಮಾಂಕದ ದಿಢೀರ್ ವಿಕೆಟ್ ಪತನ ವಿಂಡೀಸ್ ಸೋಲಿಗೆ ಕಾರಣವಾಯಿತು.
ಅಂತಿಮವಾಗಿ ವಿಂಡೀಸ್ ತಂಡ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ 23 ರನ್ ಗಳ ಅಂತರದಲ್ಲಿ ಸೋಲು ಕಂಡಿತು.