
ಮೈಸೂರು: ನಾವು ಯಾವ ರಿವರ್ಸ್ ಆಪರೇಷನ್ ಮಾಡುವುದಕ್ಕೆ ಹೋಗುವುದಿಲ್ಲ. ನನಗೆ ಆಸಕ್ತಿ ಇಲ್ಲ, ಅಗತ್ಯ ಬಿದ್ದರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್‌ಗಳನ್ನು ಮಾಡುವುದು ಸರಿಯಲ್ಲ ಎಂದರು.
ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ , ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಆದರೆ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಯವರೇ ಎಲ್ಲಾ ಪಿತೂರಿ ಮಾಡುತ್ತಿರುವುದು. ಅಮಿತ್ ಶಾ , ನರೇಂದ್ರ ಮೋದಿ ಸೇರಿ ಬಿಜೆಪಿಯವರೆಲ್ಲರೂ ಕೆಲಸ ಮಾಡುತ್ತಿದ್ದಾರೆ ಎಂದರು.