ಬೆಂಗಳೂರು:ನಿರೀಕ್ಷೆಯಂತೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಏತನ್ಮಧ್ಯೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರ ಸ್ವಾಮಿ ಹೆಸರನ್ನು ಘೋಷಿಸಲಾಯಿತು. ಜೆಪಿ ಭವನದಲ್ಲಿ ಎಚ್.ಡಿ.ದೇವೇಗೌಡರು ಹೆಸರನ್ನು ಘೋಷಿಸಿ, ನಿಖಿಲ್ ಕುಮಾರಸ್ವಾಮಿಗೆ ಹಾರ ಹಾಕಿ ಶುಭಹಾರೈಸಿದರು.
ನಿರ್ಗಮಿತ ಅಧ್ಯಕ್ಷ ಎಚ್. ವಿಶ್ವನಾಥ್ ಅವರು ನೂತನ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.