ಬೆಂಗಳೂರು, ಜು.4- ರಾಮನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಎಂ.ಪಿ.ಅಶೋಕ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಶಾಸಕರಾದ ಅನಿತಾಕುಮಾರಸ್ವಾಮಿ ಅವರಿಗೆ ನೀಡಿದ್ದಾರೆ.
ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಇಷ್ಟು ವರ್ಷಗಳ ಕಾಲ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕರಾದ ಅನಿತಾಕುಮಾರಸ್ವಾಮಿ ಅವರಿಗೆ ಧನ್ಯವಾದ ಅರ್ಪಿಸಿ ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ.
ಎಂ.ಪಿ.ಅಶೋಕ್ಕುಮಾರ್ ಅವರು ರಾಮನಗರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಅಂಚೆ ಮೂಲಕ ಕಳುಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.