ಬೆಂಗಳೂರು, ಜು.5-ದೇಶದ ಸಮಗ್ರ ಆರ್ಥಿಕ ಬೆಳವಣಿಗೆಗೆ ಹಾಗೂ ಎಂಎಸ್ಎಂಇ ವಲಯದ ಕೈಗಾರಿಕೋದ್ಯಮಕ್ಕೆ ಇಂದಿನ ಬಜೆಟ್ ಹೊಸ ಚೈತನ್ಯ ಮೂಡಿಸಿದೆ ಎಂದು ಕಾಸಿಯಾ ಅಧ್ಯಕ್ಷ ಆರ್.ರಾಜು ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಎರಡನೇ ಅವಧಿಯ ಪ್ರಥಮ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಅವರು ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡಿ ನಿರುದ್ಯೋಗ ಸಮಸ್ಯೆಗೆ ನವೋದ್ಯಮಗಳು ಉತ್ತಮ ಪರಿಹಾರವಾಗಬಹುದು ಎಂಬ ನಿರೀಕ್ಷೆಯೊಂದಿಗೆ ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ ಪ್ರೋತ್ಸಾಹ ನೀಡಿರುವ ಬಜೆಟ್ ಇದಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗೂ ಒತ್ತಾಸೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.