ಪಾಸ್‍ಪೋರ್ಟ್ ಹೊಂದಿರುವ ಅನಿವಾಸಿಭಾರತೀಯರಿಗೆ ತಕ್ಷಣ ಆಧಾರ್ ಕಾರ್ಡ್

ನವದೆಹಲಿ, ಜು.5-ಪಾಸ್‍ಪೋರ್ಟ್ ಹೊಂದಿರುವ ಅನಿವಾಸಿ ಭಾರತೀಯರಿಗೆ ತಕ್ಷಣವೇ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಂಸತ್‍ನಲ್ಲಿ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರು, ಅನಿವಾಸಿ ಭಾರತೀಯರು ಇನ್ನು ಮುಂದೆ ಆಧಾರ್‍ಕಾರ್ಡ್‍ಗಾಗಿ 180 ದಿನ ಕಾದುಕುಳಿತುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಪಾಸ್‍ಪೋರ್ಟ್ ಆಧಾರಿತವಾಗಿ ತಕ್ಷಣವೇ ಆಧಾರ್ ಕಾರ್ಡ್ ನೀಡಲಾಗುವುದು. ಅವರು ಸ್ವದೇಶಕ್ಕೆ ಮರಳಿದ ತಕ್ಷಣವೇ ಆಧಾರ್ ಕಾರ್ಡ್ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತದ ವರ್ಚಸ್ಸು ಹೆಚ್ಚುತ್ತಿರುವ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಮತ್ತೆ ಭಾರತದಲ್ಲೇ ಬಂದು ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿದ್ದು, ಇಲ್ಲಿಗೆ ಬಂದಾಗ ದಾಖಲಾತಿಗಳ ಗೊಂದಲ್ಲಿ ಸಾಕಷ್ಟು ವಿಳಂಬವಾಗುತ್ತಿತ್ತು. ಅದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ