ಜನರ ಪರವಾಗಿರುವ ಕೇಂದ್ರ ಬಜೆಟ್-ಶಿಕ್ಷಣ ತಜ್ಞ ಸುಧಾಕರ್ ಶೆಟ್ಟಿ

Varta Mitra News

ಬೆಂಗಳೂರು, ಜು.5- ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಹೊಸತನದ ಜತೆಗೆ ಶಿಕ್ಷಣಕ್ಕೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಜನರ ಪರವಾಗಿದೆ ಎಂದು ಶಿಕ್ಷಣ ತಜ್ಞ ಸುಧಾಕರ್‍ಶೆಟ್ಟಿ ಹೇಳಿದ್ದಾರೆ.

ಇಂದು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದರಲ್ಲಿ ಭರಪೂರ ಯೋಜನೆಗಳ ಘೋಷಣೆ ಬದಲು ಶಿಕ್ಷಣಕ್ಕೆ ಉತ್ತೇಜನ ನೀಡಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ ಮತ್ತು ದೇಶದ ಅಭಿವೃದ್ಧಿಗೆ ಬೇಕಾದ ಅವಶ್ಯಕತೆಗಳಿಗೆ ತಕ್ಕಂತೆ ಇಲಾಖೆಗಳಿಗೆ ಆರ್ಥಿಕ ಬಲ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯತೆ ಮೆರೆಯುವಂತೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದು, ಗ್ರಾಮೀಣ ಪ್ರದೇಶದ ಜನರಿಗೂ ಆವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ. ನೀರು ಮತ್ತು ರೈಲ್ವೆ ಯೋಜನೆಗಳು ಕೂಡ ಒಳ್ಳೆಯ ಮುನ್ಸೂಚನೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ