ಔರಾದ್ಕರ್ ವರದಿ ಜಾರಿಗೆ ಒತ್ತಾಯಿಸಿ-ಇದೇ 9ರಂದು ಕರ್ನಾಟಕ ರಕ್ಷಣಾ ಸೇನೆಯಿಂದ ಪ್ರತಿಭಟನೆ

ಬೆಂಗಳೂರು,ಜು.6-ಔರಾದ್ಕರ್ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಇದೇ 9ರಂದು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ಸೇನೆ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ರಾಜ್ಯಾಧ್ಯಕ್ಷ ಟಿ.ರಮೇಶ್ ಗೌಡ, ಅಂದು ನಗರದ ಟೌನ್‍ಹಾಲ್ ಬಳಿ ಪ್ರತಿಭಟನೆ ನಡೆಸಲಾಗುತ್ತಿದ್ದು, ನಂತರ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ನಮ್ಮೆಲ್ಲರ ರಕ್ಷಣೆ ಮಾಡುವ ಪೊಲೀಸರಿಗೆ ಮೂಲಭೂತ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಔರಾದ್ಕರ್ ವರದಿ ಜಾರಿಗೊಳಿಸಿದರೆ ಪೊಲೀಸರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶೇ.30ರಿಂದ 36ರಷ್ಟು ವೇತನ ಹೆಚ್ಚಿಸಬೇಕು, ಪೊಲೀಸ್ ಜೀತ ಪದ್ಧತಿ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ಹಲವು ವಿಷಯಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಇದನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ