ಬೆಂಗಳೂರು, ಜು.6-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಿರ್ಧಾರ ಮಾಡಿದ್ದೇನೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಖಡಾಖಂಡಿತವಾಗಿ ಹೇಳಿದ್ದಾರೆ.
ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಲು ನಿರ್ಧರಿಸಿರುವುದು ನಿಜ. ಈ ರೀತಿಯ ನಿರ್ಧಾರ ಮಾಡಬೇಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಈಗಾಗಲೇ ನಾನು ನಿರ್ಧಾರ ಮಾಡಿ ಆಗಿದೆ. ಅದನ್ನು ಬದಲಾಯಿಸುವುದಿಲ್ಲ ಎಂದು ತಿಳಿಸಿದರು.
ತಮ್ಮ ಮಗಳೂ ಆಗಿರುವ ಶಾಸಕರಾದ ಸೌಮ್ಯರೆಡ್ಡಿ ಅವರು ರಾಜೀನಾಮೆ ನೀಡುವ ಬಗ್ಗೆ ಅವರನ್ನೇ ಕೇಳಿ ಎಂದು ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ರಾಮಲಿಂಗಾರೆಡ್ಡಿ ಕೂಡ ನೇರವಾಗಿ ಸ್ಪೀಕರ್ ಕಚೇರಿಗೆ ತೆರಳಿದರು.