ಬೆಂಗಳೂರು, ಜು. 6- ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಜು. 12ರಿಂದ 26ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕಲಾಪಗಳು ಸುಗಮವಾಗಿ ನಡೆಯುವ ದೃಷಿಯಿಂದ ವಿಧಾನಸೌಧ ಕಟ್ಟಡದ ಸುತ್ತ 2ಕಿ.ಮೀ.ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಅಧಿವೇಶನ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ ಹಮ್ಮಿಕೊಳ್ಳುವ ಸಾಧ್ಯತೆಯಿರುವುದರಿಂದ ಈ ವ್ಯಾಪ್ತಿಯಲ್ಲಿ ಬೆಳಿಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12ಗಂಟೆ ವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಅಧಿವೇಶನದ ವೇಳೆ ಕಾರ್ಯಕಲಾಪಗಳಿಗೆ ಅಡಚಣೆ ಉಂಟು ಮಾಡಬಾರದು.5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇದಿಸಲಾಗಿದೆ.