ಬೆಂಗಳೂರು, ಜು. 7- ರಾಜ್ಯವು ಭೀಕರ ಬರಗಾಲವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದೆ ಎಂದು ಭಾರತ ಕಮ್ಯೂನಿಸ್ಟ ಪಕ್ಷ (ಮಾಕ್ರ್ಸ್‍ವಾದಿ) ಖಂಡಿಸಿದೆ.
ರಾಜ್ಯದಲ್ಲಿ ಬರಗಾಲ ಉಂಟಾಗಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದೆ. ಈ ವೇಳೆ ರಾಜ್ಯದ ಶಾಸಕರು ಮತ್ತು ವಿರೋಧ ಪಕ್ಷವಾದ ಬಿಜೆಪಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ರಚನಾತ್ಮಕ ಚರ್ಚೆಯಲ್ಲಿ ತೊಡಗಿ ಜನತೆಗೆ ಸರಿಯಾದ ಪರಿಹಾರ ಹುಡುಕಬೇಕಾದ ಸಮಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಮುಂದಾಗಿರುವುದು ಖಂಡನೀಯ ಎಂದು ಸಿಪಿಐಎಂ ತಿಳಿಸಿದೆ.