ಲಂಕಾ ಧ್ವಂಸ ಮಾಡಿದ ಕೊಹ್ಲಿ ಸೈನ್ಯ:ಸೆಮೀಸ್‍ನಲ್ಲಿ ಟೀಮ್ ಇಂಡಿಯಾ ಎದುರಾಳಿ ನ್ಯೂಜಿಲೆಂಡ್

ಶ್ರೀಲಂಕಾ ವಿರುದ್ಧದ ವಿಶ್ವಕಪ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ 15 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆದರೆ ಭಾರತದ ಅಗ್ರಪಟ್ಟ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಇತ್ತ ಶ್ರೀಲಂಕಾ ಸೋಲಿನೊಂದಿಗೆ ವಿಶ್ವಕಪ್ ಟೂರ್ನಿಗೆ ಗುಡ್ ಬೈ ಹೇಳಿತು.

 

 

 

 

 

 

 

 

 

 

 

 

 

 

 

 

 

 

 

 

ಗೆಲುವಿಗೆ 265 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ಗೆ ಈ ಜೋಡಿ 189 ರನ್ ಜೊತೆಯಾಟ ನೀಡೋ ಮೂಲಕ ದಾಖಲೆ ಬರೆಯಿತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಶತಕ ಸಿಡಿಸಿ ಮಿಂಚಿದರು. ರೋಹಿತ್ ವಿಶ್ವಕಪ್ ಟೂರ್ನಿಯಲ್ಲಿ 5ನೇ ಸೆಂಚುರಿ ಪೂರೈಸಿ, ಶ್ರೀಲಂಕಾದ ಕುಮಾರ ಸಂಗಕ್ಕಾರ ದಾಖಲೆ ಪುಡಿ ಮಾಡಿದರು.

ರೋಹಿತ್ ಶತಕ ಸಿಡಿಸಿದ ಬೆನ್ನಲ್ಲೇ ವಿಕೆಟ್ ಕೈಚೆಲ್ಲಿದರು. ರೋಹಿತ್ 103 ರನ್ ಸಿಡಿಸಿ ಔಟಾದರು. ಇತ್ತ ರಾಹುಲ್ ಅಬ್ಬರ ಮುಂದುವರಿಸಿದರು. ನಾಯಕ ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಮುಂದುವರಿಸಿದ ರಾಹುಲ್ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಸೆಂಚುರಿ ಸಿಡಿಸಿದರು. ರಾಹುಲ್ 111 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ರಿಷಬ್ ಪಂತ್ ವಿಕೆಟ್ ಪತನಗೊಂಡಿತು.

ಕೊಹ್ಲಿ ಅಜೇಯ 34 ರನ್ ಹಾಗೂ ಹಾರ್ದಿಕ್ ಪಾಂಡ್ಯ 7 ರನ್ ನೆರವಿನಿಂದ ಟೀಂ ಇಂಡಿಯಾ 44. 3ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಸಿತು. ಭರ್ಜರಿ 7 ವಿಕೆಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ಲೀಗ್ ಪಂದ್ಯ ಮುಗಿಸಿದೆ. ಇದೀಗ ಸೆಮಿಫೈನಲ್ ಪಂದ್ಯದತ್ತ ಚಿತ್ತ ಹರಿಸಿದೆ. ಶ್ರೀಲಂಕಾ ಸೋಲಿನೊಂದಿಗೆ ಟೂರ್ನಿಗೆ ಗುಡ್ ಬೈ ಹೇಳಿತು. ಭಾರತ 15 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ .

ವಿಶ್ವಕಪ್ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 7 ವಿಕೆಟ್ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಶತಕದ ನೆರವಿನಿಂದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ದಾಖಲೆ ಬರೆದಿದೆ.

ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ವಿರುದ್ದ ಭಾರತಕ್ಕಿದು 91ನೇ ಗೆಲುವು. ಏಕದಿನ ಕ್ರಿಕೆಟ್ನಲ್ಲಿ ಒಂದು ತಂಡದ ವಿರುದ್ಧ ಗರಿಷ್ಠ ಗೆಲುವು ದಾಖಲಿಸಿದ ಪಟ್ಟಿಯಲ್ಲಿ ಇದೀಗ ಭಾರತ ಹಾಗೂ ಆಸ್ಟ್ರೇಲಿಯಾ ಜಂಟಿಯಾಗಿ ಮೊದಲ ಸ್ಥಾನ ಹಂಚಿಕೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ