![09 MLA 20](http://kannada.vartamitra.com/wp-content/uploads/2019/07/09-MLA-20-573x381.jpg)
ಬೆಂಗಳೂರು, ಜು.8- ಪಕ್ಷದ ಹಿತದೃಷ್ಟಿಯಿಂದ ಎಲ್ಲ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ. ವರಿಷ್ಠರ ನಿರ್ಧಾರಗಳಿಗೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.
ಪಕ್ಷದ ಹಿರಿಯ ನಾಯಕರಿಗೆ ರಾಜೀನಾಮೆ ಸಲ್ಲಿಸಿದ್ದೇವೆ. ಅವರು ಅದನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಬಹುದು. ರಾಜ್ಯಪಾಲರಿಗಾದರೂ ಸಲ್ಲಿಸಬಹುದು ಅಥವಾ ಅಧಿಕಾರದಲ್ಲಿ ಮುಂದುವರಿಸಬಹುದು. ಒಟ್ಟಾರೆ ಅವರ ನಿರ್ಧಾರಕ್ಕೆ ನಾವು ಬದ್ಧ ಎಂದರು.
ಸರ್ಕಾರ ಸುಭದ್ರವಾಗಿರುತ್ತದೆ ಎಂಬ ವಿಶ್ವಾಸವಿದೆ. ಎಲ್ಲ ಬಿಕ್ಕಟ್ಟು ಶೀಘ್ರವೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.