ಬಿಜೆಪಿ ಆಪರೇಷನ್ ಕಮಲ ಮಾಡಿಲ್ಲ-ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು,ಜು.8-ಬಿಜೆಪಿ ಆಪರೇಷನ್ ಕಮಲ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ಅಗತ್ಯಬಿದ್ದರೆ ನಾವು ರಾಜ್ಯಪಾಲರನ್ನು ಕೂಡ ಭೇಟಿ ಮಾಡುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರು ಸ್ವಯಂಪ್ರೇರಿತರಾಗಿಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೂಕ್ತ ಮಾನ್ಯತೆ ಸಿಗುತ್ತಿಲ್ಲ ಎಂಬ ಆರೋಪಿಸಿ ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ಮುಂಬೈಗೆ ತೆರಳಿರುವ ಅತೃಪ್ತ ಶಾಸಕರಿಗೆ ಬಿಜೆಪಿ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಾರಿಗೆ ವ್ಯವಸ್ಥೆ ಕೇವಲ ಒಬ್ಬರಿಗೆ ಮಾತ್ರ ಸೀಮಿತವಲ್ಲ. ಎಲ್ಲರ ಒಡೆತನದಲ್ಲೂ ಸಾರಿಗೆ ವ್ಯವಸ್ಥೆ ಇದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಪಕ್ಷ ಸಂಘಟನೆಯಾಗಬೇಕೆಂದರೆ ಒಂದು ಕಡೆ ಕೂತು ಚರ್ಚೆ ಮಾಡುವುದು ಸಹಜ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ