
ಲಖನೌ: ಆಗ್ರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಬಸ್ ಅಪಘಾತದಲ್ಲಿ 29 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಈ ಭೀಕರ ದುರಂತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಉಳಿದ ಪ್ರಯಾಣಿಕರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 40 ಪ್ರಯಾಣಿಕರಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಾಲುವೆಗೆ ಉರುಳಿದೆ.
ಘಟನೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.