ಬೆಂಗಳೂರು,ಜು.8- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಇನ್ನೂ ಮುಂದೆ ನಾನು ಇನ್ನಷ್ಟು ಮಗ್ನನಾಗಿರುತ್ತೇನೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಆರ್.ಟಿ.ನಗರದ ಎಚ್.ಎಂ.ಟಿ. ಮೈದಾನದಲ್ಲಿ ಆಯೋಜಿಸಿದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ತಮ್ಮನ್ನು ಎಲ್ಲರೂ ಮೈಲ್ಡ್ ಎನ್ನುತ್ತಾರೆ ಆದರೆ ಇನ್ನೂ ಮುಂದೆ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ವೈಲ್ಡ್ ಆಗಬೇಕಾಗುತ್ತದೆ ಎಂದರು.
ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಅದೇ ರೀತಿ ಪಕ್ಷಪಾತ ಧೋರಣೆಯಿಂದ ವೃತ್ತಿಸುವ ಪೊಲಿಸ್ ಅಧಿಕಾರಿಗಳ ವಿರುದ್ದವು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಭಿವೃದ್ಧಿ ಕುರಿತಂತೆ ಸರಕಾರಿ ಯೋಜನೆಗಳ ಅನುಷ್ಠಾನ ಸಂಬಂಧ ತಿಂಗಳಿಗೊಮ್ಮೆ ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಶೀಲನೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ಭೃಷ್ಟಾಚಾರ ಹಾಗೂ ಹಗರಣಗಳು ನಡೆಯಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಗೆಲುವು ಮತದಾರರು ಹಾಗೂ ಪಕ್ಷದ ಕಾರ್ಯಕರ್ತರ ಗೆಲುವು ಎಂದು ಅವರು ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಡಾ ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಅರವಿಂದ್ ಲಿಂಬಾವಲಿ, ರಾಜುಗೌಡ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ, ಬಿಜೆಪಿ ಯುವ ಮುಖಂಡ ಹರೀಶ್, ಹಾಗೂ ಗಂಗಬೈರಯ್ಯ ಹಾಜರಿದ್ದರು.