ಬೆಂಗಳೂರು, ಜು.8- ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.
ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಮೈತ್ರಿ ಬಿಕ್ಕಟ್ಟು ಪರಿಹರಿಸಲು ನಿನ್ನೆ ರಾತ್ರಿಯಿಂದಲೂ ನಿರಂತರವಾಗಿ ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಮುಖ್ಯಮಂತ್ರಿ ಇಂದು ವಿಧಾನಸೌಧಕ್ಕೆ ಆಗಮಿಸಿದರಾದರೂ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ನನ್ನ ಕರ್ತವ್ಯವನ್ನು ನಾನು ನಿಭಾಯಿಸುತ್ತೇನೆ ಎಂದು ಮಾತ್ರ ಉತ್ತರಿಸಿದರು.