ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡುವುದಿಲ್ಲ-ಶಾಸಕ ಆರ್.ಮಂಜುನಾಥ್

ಬೆಂಗಳೂರು,ಜು.8- ಬಿಜೆಪಿಯವರ್ಯಾರು ತಮ್ಮನ್ನು ಸಂಪರ್ಕಿಸಿಲ್ಲ. ಸಂಪರ್ಕಿಸುವುದು ಬೇಡ ಎಂದು ದಾಸರಹಳ್ಳಿ ಜೆಡಿಎಸ್ ಶಾಸಕ ಆರ್.ಮಂಜುನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪಕ್ಷದ ಕಟ್ಟಾಳಾಗಿದ್ದು, ಯಾವುದೆ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರನ್ನು ಭೇಟಿ ಮಾಡಲು ಬಂದಿದ್ದಾಗಿ ತಿಳಿಸಿದರು.

ಜೆಡಿಎಸ್ ಚಿಹ್ನೆಯಡಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತನಾಗಿದ್ದೇನೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತೇ ಇಲ್ಲ. ಇತರೆ ಶಾಸಕರು ನೀಡಿರುವ ರಾಜೀನಾಮೆ ಅವರ ವೈಯಕ್ತಿಕ ವಿಚಾರ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ