ನನ್ನ ನಿರ್ಧಾರ ಅಚಲ-ರಾಮಲಿಂಗಾರೆಡ್ಡಿ

ಬೆಂಗಳೂರು, ಜು.8- ಕಳೆದ 30 ವರ್ಷಗಳಿಂದ ನಾನು ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕೆ ಯಾವುದೇ ಲಾಬಿ ಕೂಡ ನಾನು ಮಾಡಿಲ್ಲ ಎಂದು ರಾಮಲಿಂಗಾರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ರಾಜೀನಾಮೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ನಿರ್ಧಾರ ಅಚಲವಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಯಾರೊಂದಿಗೂ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ರಾಜೀನಾಮೆ ನೀಡಿರುವ 10ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಮುಂಬೈನಲ್ಲಿ ತಂಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಮುಂಬೈಗೂ ಹೋಗಲ್ಲ, ದೆಹಲಿಗೂ ಹೋಗಲ್ಲ. ಬೆಂಗಳೂರಿನಲ್ಲೇ ಇರುತ್ತೇನೆ ಎಂದು ಹೇಳಿದರು.

ಪುತ್ರಿ ಸೌಮ್ಯಾರೆಡ್ಡಿ ತಮ್ಮ ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ