ಹೈಕಮಾಂಡ್ ಸೂಚನೆ ಮೇರೆಗೆ ಸಚಿವರ ರಾಜೀನಾಮೆ

ಬೆಂಗಳೂರು,ಜು.8- ಹೈಕಮಾಂಡ್ ಸೂಚನೆ ಮೇರೆಗೆ ಕಾಂಗ್ರೆಸ್‍ನ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಪರಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಭದ್ರವಾಗಿರುತ್ತದೆ. ಸರ್ಕಾರವನ್ನು ಉಳಿಸಿಕೊಳ್ಳಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಶಾಸಕರ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಅವರನ್ನು ಮರಳಿ ತರುವ ವಿಶ್ವಾಸವಿದೆ ಎಂದು ಹೇಳಿದರು.

ಅತೃಪ್ತರ ಜೊತೆ ಸಂಧಾನಕ್ಕಾಗಿ ಯಾವ ನಾಯಕರು ಹೋಗುತ್ತಿಲ್ಲ. ಶಾಸಕರೇ ಸ್ವಯಂ ಪ್ರೇರಿತರಾಗಿ ಅವರೇ ವಾಪಸ್ ಬರುತ್ತಾರೆ. ರಾಜೀನಾಮೆ ಕೊಟ್ಟಿರುವವರೆಲ್ಲರೂ ನಿಷ್ಠಾವಂತ ಕಾಂಗ್ರೆಸ್‍ನ ಶಾಸಕರು. ಕೆಲವು ಸಣ್ಣಪುಟ್ಟ ಗೊಂದಲಗಳಿಂದ ಅಸಮಾಧಾನಗೊಂಡಿದ್ದಾರೆ.

ಕೆಲವರಿಗೆ ಸಚಿವ ಸ್ಥಾನದ ಬೇಡಿಕೆ ಇದೆ.ಇನ್ನು ಕೆಲವರಿಗೆ ತಮ್ಮ ಕ್ಷೇತ್ರದ ಅಭಿವೃದ್ದಿಯ ಬೇಡಿಕೆ ಇದೆ. ಇದೆಲ್ಲವೂ ಸಣ್ಣಪುಟ್ಟ ಸಮಸ್ಯೆಗಳು ಪ್ರಮುಖವಾಗಿ ಬಿಜೆಪಿ ನಡೆಸುತ್ತಿರುವ ರಾಜಕೀಯ ಕುತಂತ್ರವೇ ಸಮಸ್ಯೆಯ ಮೂಲ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ