ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಶಾಸಕ ಸ್ಥಾನಕ್ಕೆ ರಾಜಿನಾಮೆ ನಡಿ ಮುಂಬೈಗೆ ಹಾರಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಶಾಕ್ ನೀಡಿದ್ದಾರೆ.
ಅತೃಪ್ತ ಶಾಸಕರು ನೀಡಿರುವ ರಾಜಿನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ, ಸಂವಿಧಾನದ ಪ್ರಕಾರ, ನೀತಿ ನಿಯಮದ ಪ್ರಕಾರ ಶಾಸಕರ ಖುದ್ದು ಭೇಟಿಯಾಗಿ ರಾಜಿನಾಮೆ ನೀಡಬೇಕು, ಆ ನಂತರ ಅಂಗೀಕಾರ ಪ್ರಕ್ರಿಯೆ ನಡೆಸಲಿದ್ದೇನೆ, ಪ್ರತಿಯೊಬ್ಬ ಅತೃಪ್ತ ಶಾಸಕರನ್ನು ಕರೆದು ಮಾತನಾಡಿ ಚರ್ಚಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನೂ ಸ್ಪೀಕರ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಅತೃಪ್ತ ಶಾಸಕರು, ನಾವು ಸ್ಪೀಕರ್ ನಿರ್ಧಾರಕ್ಕೆ ಬದ್ದವಾಗಿದ್ದೇವೆ, ಅವರು ಕರೆದ ಕೂಡಲೇ ನಾವು ವಾಪಸ್ ಬರುವುದಾಗಿ ವಿಶ್ವನಾಥ್ ಹೇಳಿದ್ದಾರೆ. ಸ್ಪೀಕರ್ ಮೇಲೆ ನಮಗೆ ಅಪಾರ ಗೌರವವಿದೆ, ನಮ್ಮ ರಾಜಿನಾಮೆ ಅಂಗೀಕರಿಸುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.