ಸದ್ಯಕ್ಕೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ-ಮಾಜಿ ಸಚಿವ ರಾಮಲಿಂಗಾರಡ್ಡಿ

ಬೆಂಗಳೂರು, ಜು.10- ಸದ್ಯಕ್ಕೆ ಯಾವುದೇ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ತಾವು ನೀಡಿರುವ ರಾಜೀನಾಮೆ ಕ್ರಮಬದ್ಧವಾಗಿದೆ. ಜು.15ರಂದು ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಅಲ್ಲಿಯವರೆಗೂ ಯಾವುದೇ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಜು.15ರಂದು ಸಭಾಧ್ಯಕ್ಷರನ್ನು ಭೇಟಿಯಾದ ನಂತರ ರಾಜಕೀಯ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ