ಬಿಜೆಪಿ ಶಾಸಕ ಮಾಧುಸ್ವಾಮಿ ಮಾತ್ರ ಭೇಟಿಗೆ ಸಮಯ ಕೇಳಿದ್ದಾರೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.10- ಬಿಜೆಪಿ ಶಾಸಕ ಮಾಧುಸ್ವಾಮಿ ಅವರನ್ನು ಹೊರತುಪಡಿಸಿ ಯಾವುದೇ ಶಾಸಕರು ತಮ್ಮ ಭೇಟಿಗೆ ಸಮಯ ಕೇಳಿಲ್ಲ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯಾವುದೇ ಶಾಸಕರು ಕೂಡ ತಮ್ಮ ಸಮಯಾವಕಾಶ ಕೋರಿಲ್ಲ ಎಂದು ಸ್ಪಷ್ಟಪಡಿಸಿದರು.

ತಾವು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿದ್ದು, ಮಧ್ಯಾಹ್ನ ವಿಧಾನಸೌಧದ ಕಚೇರಿಗೆ ಬರುವುದಾಗಿ ಹೇಳಿದರು. ಮಾಧುಸ್ವಾಮಿ ಅವರ ಭೇಟಿಗೆ ಸಮಯಾವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ