ಬೆಂಗಳೂರು, ಜು.11- ಕಾರ್ಮಿಕ ಸೇವಾ ಕೇಂದ್ರವನ್ನು ರೇಸ್ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಷದ ಕಚೇರಿಯಲ್ಲಿ ಜು.13ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಕೆಪಿಸಿಸಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಆಗಮಿಸಲಿದ್ದು, ಈ ಸೇವಾ ಕೇಂದ್ರವು ಕಾರ್ಮಿಕರಿಗೆ ತುಂಬಾ ಅನುಕೂಲವಾಗುತ್ತದೆ.ಸೇವಾ ಕೇಂದ್ರವು 224 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 32 ಜಿಲ್ಲೆಗಳಲ್ಲಿ ಸಹ ಸೇವಾ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಲಾಗಿದೆ.
ಸಮಾರಂಭವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾರ್ಮಿಕ ಸಚಿವ ವೆಂಕಟರಮಣ, ಕೆಪಿಸಿಸಿ ಕಾಂಗ್ರೆಸ್ ಪದಾಧಿಕಾರಿಗಳು, ಹಿರಿಯ ಕಾಂಗ್ರೆಸ್ ಮುಕಂಡರು ಉಪಸ್ಥಿತರಿರುವರು.